ಅಭಿಪ್ರಾಯ / ಸಲಹೆಗಳು

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST)

        

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST)

ಸರ್ಕಾರದ ಆದೇಶ ಸಂಖ್ಯೆ: ಡಿಪಿಎಆರ್‌ 241 ಎಸ್‌ಜಿಓ 1981, ದಿನಾಂಕ:02.04.1981ರಲ್ಲಿ, ವಿಜ್ಞಾನ  ಮತ್ತು ತಂತ್ರಜ್ಞಾನ ಇಲಾಖೆಯನ್ನು 1981 ರಲ್ಲಿ ಸ್ಥಾಪಿಸಲಾಗಿರುತ್ತದೆ. ಕರ್ನಾಟಕ  ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು  ವಿಜ್ಞಾನ ಶಿಕ್ಷಣದ ಅಂಶಗಳಿಗೆ, ರಾಜ್ಯದ ಅಭಿವೃದ್ಧಿ ಅಗತ್ಯಗಳಿಗೆ  ಹೆಚ್ಚಿನ ಒತ್ತು ನೀಡುತ್ತಿದ್ದು ವಿಜ್ಞಾನ ಮತ್ತು ತಂತ್ರಜ್ಞಾನ ಯೋಜನೆಗಳನ್ನು ತಯಾರಿಸಿ  ಬೆಳವಣಿಗೆಯನ್ನು ಪ್ರಾಥಮಿಕ  ಹಂತದಲ್ಲಿಯೇ  ಬಲಪಡಿಸುವಲ್ಲಿ ಕಾರ್ಯನಿರತವಾಗಿದೆ. 

 

ಇಂದಿನ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ಬೆಳವಣಿಗೆ ಮತ್ತು ಅಭಿವೃದ್ಧಿಯ ಬಹು ಶಕ್ತಿಯುತ ಚಾಲನಾಶಕ್ತಿಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನವು, ಬಹುತೇಕ ತಂತ್ರಜ್ಞಾನ ಅಭಿವೃದ್ಧಿಯ ಮೂಲಕ, ನಾವು ಬದುಕುವ ರೀತಿಯ ಮೇಲೆ ಅಗಾಧ ಪರಿಣಾಮವನ್ನು ಉಂಟು ಮಾಡಿದ್ದು, ನಮ್ಮ ದೈನಂದಿನ ಜನಜೀವನವನ್ನು ಉತ್ತಮ ಹಾಗೂ ಸುಲಭಪಡಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅನನ್ಯವಾಗಿದೆ. ಆದುದರಿಂದ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿಯು ವಿಶೇಷವಾಗಿ ಜನಜೀವನ ಮಟ್ಟವನ್ನು ಹೆಚ್ಚಿಸಲು, ಮೂಢನಂಬಿಕೆ ಮತ್ತು ಅಂಧಶ್ರದ್ಧೆಯನ್ನು ತೊಲಗಿಸಲು, ಸಂಪತ್ತನ್ನು ವೃದ್ಧಿಸಲು ಹಾಗೂ ನೈಸರ್ಗಿಕ ಸಂಪನ್ಮೂಲಗಳು ಮತ್ತು ಜೀವ ವೈವಿಧ್ಯತೆಯನ್ನು ಕಾಪಾಡಿಕೊಳ್ಳಲು ಬಹಳ ಮುಖ್ಯವಾಗಿದೆ. 

ಈ ಹಿನ್ನೆಲೆಯಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿಯ ಎಲ್ಲಾ ರಂಗಗಳಲ್ಲೂ ಮುಖ್ಯವಾಹಿನಿಗೆ ತರುವುದು ಅವಶ್ಯವಿದ್ದು, ವೈಜ್ಞಾನಿಕ ಮುನ್ನಡೆ ಮತ್ತು ತಂತ್ರಜ್ಞಾನದ ಆವಿಷ್ಕಾರಗಳನ್ನು ಸಮಾಜದ ಒಳಿತಿಗಾಗಿ, ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬಳಸಿಕೊಳ್ಳುವಂತಾಗಬೇಕಾಗಿದೆ. 

 

ಆದುದರಿಂದ, ವೈಜ್ಞಾನಿಕ ಅಭಿವೃದ್ಧಿಯ ಮಾಹಿತಿಯನ್ನು ಪ್ರಸಾರ ಮಾಡುವ ಮೂಲಕ ವೈಜ್ಞಾನಿಕ ಅರಿವನ್ನು ಮೂಡಿಸಿ, ವೈಜ್ಞಾನಿಕ ಮನೋಭಾವನೆಯನ್ನು ಸಮಾಜದ ಎಲ್ಲಾ ಸ್ತರಗಳಲ್ಲೂ ಬೆಳೆಸಿ, ಗ್ರಾಮೀಣ ಜನರ ಜೀವನಮಟ್ಟವನ್ನು ಉತ್ತಮಗೊಳಿಸಬೇಕಾಗಿದೆ. ಅಲ್ಲದೇ, ವೈಜ್ಞಾನಿಕ ಜಾಗೃತಿಯು ಸಂಪೂರ್ಣ ಸಾಮಾಜಿಕ ಚೌಕಟ್ಟಿನ ಬಲವರ್ಧನೆಗೆ ಮತ್ತು ಸಬಲೀಕರಣಕ್ಕೆ ಹಾಗೂ ಹೆಚ್ಚುತ್ತಿರುವ ಇಂದಿನ ಜಾಗತಿಕ ಮಾರುಕಟ್ಟೆಯಲ್ಲಿ ಜನಸಾಮಾನ್ಯರ ಸಮಗ್ರ ಅಭಿವೃದ್ಧಿಯನ್ನು ಸಾಧಿಸಲು ಸಹ ನೆರವಾಗಲಿದೆ. 

 

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಈ ಕೆಳಕಂಡ ನಾಲ್ಕು ಅಂಗ ಸಂಸ್ಥೆಗಳ ಮುಖಾಂತರ ನಾಗರೀಕರ ಸಬಲೀಕರಣ ಹಾಗೂ ಸರ್ವರನ್ನೊಳಗೊಂಡ ಜಾಗೃತ ಮತ್ತು ಸುಸ್ಥಿರ ಸಮಾಜವು ರಾಜ್ಯಾದ್ಯಂತ ಬೆಳೆಯಲು ಅನುವಾಗುವಂತೆ ಹಲವಾರು ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿವೆ:

 

 1. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್‌)
 2. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ(ಕೆ.ಎಸ್‌.ಸಿ.ಎಸ್‌.ಟಿ)
 3. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ(ಕವಿತಂಅ)
 4. ಜವಾಹರ್‍ ಲಾಲ್ ನೆಹರು ತಾರಾಲಯ(ಜನೆತಾ)
*************************

 

ದೃಷ್ಠಿ & ಉದ್ದೇಶಗಳು.

 

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಪ್ರಿಯಗೊಳಿಸುವ ಜ್ಞಾನಾಧಾರಿತ ಸಮಾಜವನ್ನು ಸೃಷ್ಠಿಸುವುದು 

 • ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಜನಸಾಮಾನ್ಯರಿಗೆ ಪ್ರಸರಿಸಲು ಮತ್ತು ಜನಪ್ರಿಯಗೊಳಿಸಲು ಸಂಯೋಜಿಸುವುದು ಮತ್ತು ವೈಚಾರಿಕತೆಯ ಅರಿವು ಮತ್ತು ಕುತೂಹಲವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು.
 • ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಸಂಸ್ಥೆಗಳನ್ನು ಪ್ರೊತ್ಸಾಹಿಸುವುದು.
 • ವಿಜ್ಞಾನ ಮತ್ತು ತಂತ್ರಜ್ಞಾನದ ಶಿಕ್ಷಣ ಮತ್ತು ಸಾಮರ್ಥ್ಯ ವೃದ್ಧಿಗೆ ಉತ್ತೇಜನ ನೀಡುವುದು.
 • ವಿಜ್ಞಾನ ಮತ್ತು ತಂತ್ರಜ್ಞಾನದ ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಪ್ರಾಯೋಜಕತ್ವ ನೀಡುವುದು ಹಾಗೂ ಯುವ ಸಂಶೋಧನಕಾರರನ್ನು ಪ್ರೊತ್ಸಾಹಿಸುವುದು.
 • ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನವನ್ನು ಪ್ರೊತ್ಸಾಹಿಸುವುದು.
 • ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಕಾರ್ಯಕ್ರಮಗಳನ್ನು ಆಯೋಜಿಸುವುದು.

 

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಸೊಸೈಟಿಗಳು.

 

 1. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) :

 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು (Karnataka Science and Technology Promotional Society-KSTePS) 2013 ರಲ್ಲಿ ಕರ್ನಾಟಕ ಸರ್ಕಾರವು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿಯಲ್ಲಿ 1960ರ ಸೊಸೈಟಿಗಳ ನೋಂದಣಿ ಕಾಯ್ದೆಯಡಿ ಸ್ಥಾಪಿಸಲಾದ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಕೆಸ್ಟೆಪ್ಸ್‍ ಸಂಸ್ಥೆಯು  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೀತಿ, ನಿರೂಪಣೆ ಮತ್ತು ಉಪಕ್ರಮಗಳ ರಚನೆ ಹಾಗೂ ಅನುಷ್ಠಾನದ ನೆರವಿನ ಒಂದು ವ್ಯವಸ್ಥೆಯಾಗಿ, ರಾಜ್ಯಾದ್ಯಂತ ಇಲಾಖೆಯ ಕಾರ್ಯಕ್ರಮಗಳ, ನಿಧಿಗಳ ಹಂಚಿಕೆಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಜಾಲತಾಣwww.ksteps.karnataka.gov.in

*************************

 1. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) :

 

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಕರ್ನಾಟಕ ಸರ್ಕಾರದ ಒಂದು ನೋಂದಾಯಿತ ಸೊಸೈಟಿಯಾಗಿದ್ದು, 1960ರ ಸೊಸೈಟಿ ನೋಂದಾವಣೆ ಅಧಿನಿಯಮದಡಿಯಲ್ಲಿ 1975 ರಲ್ಲಿ ಸ್ಥಾಪಿಸಲಾಗಿದೆ. ಇದು ದೇಶದಲ್ಲಿಯೇ ಪ್ರಥಮವಾಗಿ ಸ್ಥಾಪಿಸಲ್ಪಟ್ಟ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಾಗಿರುತ್ತದೆ. ಮಂಡಳಿಯು ವಿಜ್ಞಾನ ಆಧಾರಿತ ಬಳಕೆ ವಿಧಾನಗಳ ಬಗ್ಗೆ ತಿಳುವಳಿಕೆ ಮೂಡಿಸಲು ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಂಯೋಜಿಸುವುದು, ಸ್ಥಳೀಯ-ನಿರ್ದಿಷ್ಟ ಸಮಸ್ಯೆಗಳನ್ನು ಬಗೆಹರಿಸಲು ಸಮಾಜವು ಅನುಸರಿಸಲು ಸೂಕ್ತವಾದ ತಾಂತ್ರಿಕತೆಗಳನ್ನು ಅಭಿವೃದ್ಧಿಗೊಳಿಸುವುದು ಮತ್ತು ಜನಪ್ರಿಯಗೊಳಿಸುವುದು ಮತ್ತು ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಮಾನವ ಸಂಪನ್ಮೂಲಗಳನ್ನು ಉತ್ತಮಗೊಳಿಸುವುದು ಮತ್ತು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.

ಜಾಲತಾಣ: https://www.kscst.org.in/ 

*************************

 1. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆ.ಎಸ್.ಟಿ.ಎ.) :

 

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯುನ್ನು (ಕವಿತಂಅ) ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಪದ್ಮ ವಿಭೂಷಣ ಪುರಸ್ಕೃತ ದಿವಂಗತ ಪ್ರೊ. ಯು. ಆರ್. ರಾವ್, ನಿವೃತ್ತ ಅಧ್ಯಕ್ಷರು, ಇಸ್ರೋ/ಕಾರ್ಯದರ್ಶಿ, ಬಾಹ್ಯಾಕಾಶ ಇಲಾಖೆ, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ 2005ರ ಜುಲೈನಲ್ಲಿ ಸ್ಥಾಪಿಸಲಾಗಿದೆ. ಅಕಾಡೆಮಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು ಹಾಗೂ ಮೂಲ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆಯನ್ನು ಉತ್ತೇಜಿಸುವುದಾಗಿದೆ.

ಜಾಲತಾಣ: http://kstacademy.in/ 

*************************

 1. ಜವಾಹರಲಾಲ್ ನೆಹರೂ ತಾರಾಲಯ (ಜೆ.ಎನ್.ಪಿ.) :

 

ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯವನ್ನು ಬೆಂಗಳೂರು ಮಹಾನಗರ ಪಾಲಿಕೆಯು (ಈಗಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) 1989ರಲ್ಲಿ ಸ್ಥಾಪಿಸಿದೆ. ತಾರಾಲಯದ ಆಡಳಿತ ನಿರ್ವಹಣೆಯನ್ನು 1992ರಲ್ಲಿ ಸ್ಥಾಪಿಸಲ್ಪಟ್ಟ, ಬೆಂಗಳೂರು ಅಸೋಷಿಯೇಶನ್ ಫಾರ್ ಸೈನ್ಸ್ ಎಜುಕೇಷನ್ (ಬೇಸ್) ಇವರಿಗೆ ನೀಡಲಾಗಿದೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದು, ಅನೌಪಚಾರಿಕ ವಿಜ್ಞಾನ ಶಿಕ್ಷಣವನ್ನು ನೀಡುವುದು ಮತ್ತು ಆಕಾಶ ಮಂದಿರದ ಪ್ರದರ್ಶನಗಳನ್ನು ಹಮ್ಮಿಕೊಳ್ಳುವುದು ತಾರಾಲಯದ ಪ್ರಮುಖ ಕಾರ್ಯಕ್ರಮಗಳಾಗಿವೆ.

ಜಾಲತಾಣ: https://www.taralaya.org/ 

*************************

 

ಇತ್ತೀಚಿನ ನವೀಕರಣ​ : 31-10-2022 03:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080